ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭಯದಿಂದಾಗಿ ಮೋದಿ ಸರ್ಕಾರ ಗುತ್ತಿಗೆದಾರರ ಮೇಲೆ ಐಟಿ ದಾಳಿ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಟ್ವಿಟ್ ಮಾಡಿ, ಕಾರ್ಪೊರೇಟ್ ಭ್ರಷ್ಟಾಚಾರ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ಅದಾನಿ ಕೈಗೆ ಒತ್ತೆ ಇಟ್ಟಿರುವ ಬಿಜೆಪಿಗರು ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದಿದ್ದಾರೆ.
ರಾಜ್ಯದಲ್ಲಿ 40% ಕಮಿಷನ್ ನಿಂತು ಹೋಗಿದ್ದರಿಂದ ಉದ್ಯಮಿ, ಗುತ್ತಿಗೆದಾರರನ್ನು ಬೆದರಿಸಿ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.