ಬೆಂಗಳೂರು: ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ವೇತನ 33,450-62600 ಸಿಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಆಸಕ್ತರು ಆನ್ಲೈನ್ ಮೂಲಕ ನ.2ರೊಳಗೆ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಡಿಪ್ಲೊಮ ನರ್ಸಿಂಗ್, ಬಿಎಸ್ಸಿ ನರ್ಸಿಂಗ್ ಉತ್ತೀರ್ಣರಾಗಿರಬೇಕು. ನರ್ಸಿಂಗ್ ಕೌನ್ಸಿಲ್ನಲ್ಲಿ ರಿಜಿಸ್ಟ್ರೇಷನ್ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ವೆಬ್ ಗೆ ಲಾಗಿನ್ ಆಗಿ.!