10 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಸ್ಟಾಫ್ ನರ್ಸ್ ಗಳನ್ನು ಖಾಯಂಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಯದೇವ ಆಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸ್ಟಾಫ್ ನರ್ಸ್‌ಗಳ ಸೇವೆಯನ್ನು ಖಾಯಂಗೊಳಿಸಲು ಆಗದು ಎಂದು ಆಸ್ಪತ್ರೆಯು ಲಿಖಿತ ಪತ್ರದಲ್ಲಿ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರೀಟ್ ಅರ್ಜಿ ಸಲ್ಲಿಸಲಾಗಿತ್ತು.
