ಸ್ತ್ರೀಶಕ್ತಿಯ ಸಂಕೇತ ಓಬವ್ವ ಜನಮಾನಸದಲ್ಲಿ ಅಜರಾಮರ: ಸಚಿವ ಡಿ.ಸುಧಾಕರ್ .!

 

ಚಿತ್ರದುರ್ಗ:  ಚಿತ್ರದುರ್ಗದ ಒನಕೆ ಓಬವ್ವ ನಿಸ್ವಾರ್ಥದ ನಾಡಪ್ರೇಮ, ನಾಡಪ್ರಭುವಿಗಾಗಿ ಒನಕೆಯನ್ನೇ ಆಯುಧವನ್ನಾಗಿ ಹಿಡಿದು ಶತ್ರುಗಳ ನಿರ್ನಾಮ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮಗಳಾಗಿ, ಸ್ತ್ರೀಶಕ್ತಿಯ ಸಂಕೇತವಾಗಿ ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾಳೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ಗ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ವೀರ ವನಿತೆ ಒನಕೆ ಓಬವ್ವ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಈ ನಾಡಿಗೆ ಹಾಗೂ ಸಮಾಜಕ್ಕೆ ಮಹನೀಯರು, ಮಹಿಳೆಯರು ನೀಡಿದ ಕೊಡುಗೆ, ತ್ಯಾಗ, ಬಲಿದಾನ, ಸಾಧನೆಗಳ ಸಾರ್ಥಕ ಸೇವೆ ಗುರುತಿಸಿ ಸರ್ಕಾರದ ನಿಯಮಗಳ ಅಡಿಯಲ್ಲಿ ಈ ಜಯಂತಿ ಆಚರಿಸಲಾಗುತ್ತಿದೆ. ಅಂತಹ ತ್ಯಾಗ, ನಿಷ್ಟೆ, ಧೈರ್ಯದ ತ್ರಿವೇಣಿ ಸಂಗಮದಂತಿರುವ ಐತಿಹಾಸಿಕ ಕೋಟೆನಾಡು ರಕ್ಷಿಸಿದ ಛಲವಾದಿ ಸಮುದಾಯದ ಹೆಮ್ಮೆಯ ಕನ್ನಡತಿ ಒಬವ್ವ ಹಾಗೂ ದುರ್ಗದ ಶಕ್ತಿಯ ಸ್ವರೂಪ ಓನಕೆ ಒಬವ್ವ ಎಂದು ಬಣ್ಣಿಸಿದರು.

ರಾಜವೀರ ಮದಕರಿ ನಾಯಕರ ಆಳ್ವಿಕೆಯ ಕಾಲದಲ್ಲಿ ಚಿತ್ರದುರ್ಗದ ಕೋಟೆಗೆ ಒದಗಿ ಬಂದ ಆಪತ್ತನ್ನು ಓರ್ವ ಸಾಮಾನ್ಯ ಮಹಿಳೆಯಾದ ಓಬವ್ವ ತನ್ನ ಮನೆಯಲ್ಲಿದ್ದ ಓನಕೆಯಿಂದ ಶತ್ರು ಸೈನ್ಯ ಸದೆಬಡಿದು ನಾಡಿನ ಕೋಟೆ ರಕ್ಷಿಸಿ, ಸ್ವಾಮಿ ನಿಷ್ಟೆಗೆ ಹೆಸರುವಾಸಿಯಾದ ಓಬವ್ವ ಕರ್ನಾಟಕದ ಹೆಮ್ಮೆ. ನಮ್ಮ ಕೆಲಸ ನಾವು  ಪ್ರಾಮಾಣಿಕವಾಗಿ ಮಾಡಬೇಕು ಎಂಬುದಕ್ಕೆ ಬಹುದೊಡ್ಡ ಸಾಕ್ಷಿ ಪ್ರಜ್ಞೆಯಧ್ಯೋತಕ ಒಬವ್ವ ಎಂದು ಹೇಳಿದರು.

ಯುದ್ದದ ಬಗ್ಗೆ ಯಾವುದೇ ಪರಿವೇ ಇಲ್ಲದಿದ್ದರೂ ಸಮಯ ಪ್ರಜ್ಞೆ ಹಾಗೂ ಧೈರ್ಯದಿಂದ ಹೈದರಾಲಿಯ ಸೈನಿಕರ ವಿರುದ್ದ ಹೋರಾಡಿದ ಓಬವ್ವರ ಆದರ್ಶಗಳು ನಮ್ಮೆಲ್ಲರಿಗೂ ಬೆಳಕಾಗಬೇಕು. ಕರ್ನಾಟಕ ಇತಿಹಾಸದ ಚರಿತ್ರೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿ ರಾಣಿ, ಅಬ್ಬಕ್ಕ, ದುರ್ಗದ ರಾಣಿ ಓಬವ್ವನಾಗತಿ ಇವರೆಲ್ಲರೂ ಶತ್ರುಗಳ ವಿರುದ್ಧ ಸೆಣಸಾಡಿದ ವೀರಾಗ್ರಣಿಗಳೇ, ಇಂಥ ವೀರ ವನಿತೆಯರ ಸಾಲಿಗೆ ಓಬವ್ವೆಯು ಸೇರುತ್ತಾಳೆಂಬುದು ಗರ್ವಾಭಿಮಾನದ ಸಂಗತಿ. ಓಬವ್ವೆ ಸಾಮಾನ್ಯ ಹೆಣ್ಣು ಮಗಳಾದರೂ, ತನ್ನ ರಾಜನಿಷ್ಠೆ, ನಾಡಪ್ರೇಮದಿಂದಾಗಿ ದುರ್ಗಕ್ಕಷ್ಟೆ ಅಲ್ಲ, ಕನ್ನಡ ನಾಡಿಗೆ ಹೆಮ್ಮೆಯ ಮನೆಮಗಳಾಗಿದ್ದಾಳೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ , ಮಾಜಿ ಸಚಿವ ಹೆಚ್.ಆಂಜನೇಯ,ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಒನಕೆ ಓಬವ್ವ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದ ಡಾ.ತಿಪ್ಪೇಸ್ವಾಮಿ ನೀಡಿದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕೆಡಿಪಿ ಸದಸ್ಯ ನಾಗರಾಜ್, ನಗರಸಭೆ ಮಾಜಿ ಅಧ್ಯಕ್ಷ ನಿರಂಜನ್ ಮೂರ್ತಿ,  ಛಲವಾದಿ ಸಮುದಾಯದ ಮುಖಂಡರಾದ ಭಾರ್ಗವಿ ದ್ರಾವಿಡ್, ಆರ್ ನಾಗರಾಜ್, ಶೇಷಪ್ಪ, ಎಸ್.ಎಲ್.ರವಿಕುಮಾರ್, ಸಿ.ಪಿ.ಕೃಷ್ಣಮೂರ್ತಿ ಸೇರಿದಂತೆ ನಗರಸಭೆ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement