ಲಕ್ನೋ: ಅಮೇಥಿ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದೆಯಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಈ ಬಾರಿ ಸೋಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಅವರು 1,10,684 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ಕಿಶೋರಿ ಲಾಲ್ ಅವರಿಗೆ 3,76,983 ಮತಗಳು ಬಿದ್ದರೆ, ಸ್ಮೃತಿ ಇರಾನಿಯವರಿಗೆ 2,66,299 ಮತಗಳು ಬಂದಿವೆ.
ಉತ್ತರ ಪ್ರದೇಶದ 80 ಸಂಸದೀಯ ಕ್ಷೇತ್ರಗಳಲ್ಲಿ ಒಂದಾದ ಅಮೇಥಿ ಲೋಕಸಭಾ ಕ್ಷೇತ್ರವು ಐತಿಹಾಸಿಕವಾಗಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ.