ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ. ಆದರೆ ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದಿರಾ ಗಾಂಧಿ ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದರು. ದೇಶಕ್ಕಾಗಿ ಇಂದಿರಾ ಗಾಂಧಿ ಬಹಳ ದೃಢವಾದ ನಿರ್ಧಾರ ತೆಗೆದುಕೊಳ್ತಿದ್ದರು. ಹೀಗಾಗಿ ಇಂದಿರಾ ಗಾಂಧಿ ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯುತ್ತಿದ್ದರು ಎಂದರು.
ಸಮಾಜದ ನಿರ್ಮಾಣ ಮಾಡುವುದಕ್ಕೆ ಕಾಂಗ್ರೆಸ್ ಶ್ರಮಿಸುತ್ತಿದೆ. ಇಂದಿರಾಗಾಂಧಿ ಹಠಾವೋ ಎಂದು ವಿಪಕ್ಷಗಳ ನಾಯಕರು ಎನ್ನುತ್ತಿದ್ದಾರೆ. ಆದರೆ ಇಂದಿರಾ ಗಾಂಧಿಯವರು ಗರೀಬಿ ಹಠಾವೋ ಎನ್ನುತ್ತಿದ್ದರು ಎಂದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಬೈರತಿ ಸುರೇಶ್, ಬಿ.ಕೆ ಹರಿಪ್ರಸಾದ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಚಂದ್ರಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದಾರೆ.