ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ತನ್ನ ತಾನರಿಯದೆ ಅನ್ಯರಿಗೆ ಬೋಧೆಯ ಹೇಳುವ
ಅಣ್ಣಗಳಿರಾ, ನೀವು ಕೇಳಿರೊ.
ಅವರ ಬಾಳುವೆ ರಿಂತೆಂದಡೆ
ಕುರುಡ ಕನ್ನಡಿಯ ಹಿಡಿದಂತೆ.
ತನ್ನ ಒಳಗೆ ಮರೆದು ಇದಿರಿಂಗೆ ಬೋಧೆಯ ಹೇಳಿ,
ಉದರವ ಹೊರೆವ ಚದುರರೆಲ್ಲರೂ ಹಿರಿಯರೆ ? ಅಲ್ಲಲ್ಲ.
ಇದ ಮೆಚ್ಚುವರೆ ನಮ್ಮ ಶರಣರು ?
ಅವರ ನಡೆ ರಿಂತೆಂದಡೆv
ಒಳಗನರಿದು, ಹೊರಗ ಮರೆದು,
ತನುವಿನೊಳಗಣ ಅನುವ ಹಸುಗೆಯ ಮಾಡಿದರು.
ಪೃಥ್ವಿಗೆ ಅಪ್ಪುವಿನ ಅಧಿಕವ ಮಾಡಿದರು.
ಅಗ್ನಿಯ ಹುದುಗಿದರು, ವಾಯುವ ಬೀರಿದರು, ಆಕಾಶದಲ್ಲಿ ನಿಂದರು,
ಓಂಕಾರವನೆತ್ತಿದರುz ಅದರೊಡಗೂಡಿದರು.
ಕಾಣದ ನೆಲೆಯನರಿದರುz ಪ್ರಮಾಣವನೊಂದುಗೂಡಿದರು.
ಮಹಾಬೆಳಗಿನಲ್ಲಿ ಓಲಾಡುವ ಶರಣರ ವಾಗ್ಜಾಲವಕಲಿತುಕೊಂಡು ನುಡಿವ
ಕಾಕುಮನುಜರೆತ್ತ ಬಲ್ಲರು ನಿಮ್ಮ ನೆಲೆಯಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
-ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ