ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೋಷಮುಕ್ತನಾಗಿ ಹೊರ ಬರುತ್ತೇನೆ ಎಂದು ಬಿಆರ್ ಎಸ್ ನಾಯಕಿ , ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ.ಇದು ಹಣ ಅಕ್ರಮ ವರ್ಗಾ ವಣೆ ಪ್ರಕರಣವಲ್ಲ. ರಾಜಕೀ ಯ ಪ್ರೇ ರಿತ ಪ್ರಕರಣ. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಕರಣ ಸಂಬಂಧ ಇ.ಡಿ ಕಸ್ಟಡಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಕವಿತಾ ಅವರನ್ನು ಇಂದು(ಮಂಗಳವಾರ) ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.