ಹಮ್ ದೋ ಹಮಾರೆ ಬಾರಾ ಸಿನಿಮಾದಲ್ಲಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಹೀಗಾಗಿ ಕರ್ನಾಟಕದಲ್ಲಿ ನಿಷೇಧ ಮಾಡಿ ಸರಕಾರ ಆದೇಶ ಹೊಡಡಿಸಿತ್ತು. ಈಗ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಸಿನಿಮಾ ಬಿಡುಗಡೆಯನ್ನು ಸದ್ಯಕ್ಕೆ ನಿಲ್ಲಿಸಬೇಕು ಎಂದು ಆದೇಶ ನೀಡಿದೆ. ಅರ್ಜಿಯ ಕುರಿತು ತ್ವರಿತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿದೆ.
ಅರ್ಜಿ ಇತ್ಯರ್ಥವಾಗುವವರೆಗೆ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.