ಬೆಂಗಳೂರು: ‘ನನ್ನ ಜೊತೆಗೆ ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಬಿಜೆಪಿ ನಾಯಕತ್ವ ಇಲ್ಲದ ಪಕ್ಷವಾಗಿದೆ. ಅಲ್ಲಿ ಲೀಡರ್ ಗಳು ಇಲ್ಲದೇ ಇರುವುದರಿಂದ ಲೋಕಸಭೆ ಚುನಾವಣೆ ಹತ್ತಿರ ಬರೋ ವೇಳೆ ಮತ್ತಷ್ಟು ನಾಯಕರು ನಮ್ಮ ಪಕ್ಷ ಸೇರುತ್ತಾರೆ. ಜೊತೆಗೆ ಪಕ್ಷ ಸೇರುವ ಮುನ್ನವೇ ಅವರ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಲಾಗುತ್ತೆ. ಆ ನಂತರ ಪಕ್ಷ ಸೇರ್ಪಡೆ ಮಾಡಿಕೊಳ್ಳುವ ಕೆಲಸ ಆಗಲಿದೆ ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವ್ಯಂಗ್ಯವಾಡಿದ ಅವರು, ಚುನಾವಣೆ ದೃಷ್ಟಿಯಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುತ್ತದೆ. ಕುಮಾರಸ್ವಾಮಿಯೇ ವಿರೋಧ ಪಕ್ಷದ ನಾಯಕರಾಗಬಹುದು. ಯಾಕೆಂದರೆ ಬಿಜೆಪಿಯಲ್ಲಿ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ರಾಜ್ಯಾಧ್ಯಕ್ಷರು ಬದಲಾವಣೆಯಾಗಿಲ್ಲ, ಇವಾಗ ಅವರು ಹಂಗಾಮಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಅಲ್ಲಿ ಹೇಳೋರು, ಕೇಳೋರು ಯಾರಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.