ಚಿತ್ರದುರ್ಗ: ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಾಳೆ ಎಲೆ, ಬಾಳೆ ಕಂದು, ಹೂವು, ಮಾವಿನ ಸೊಪ್ಪು ಹಾಗೂ ಇತರೆ ಪೂಜಾ ಸಾಮಗ್ರಿಗಳ ಮಾರಾಟ ಮಾಡಲು ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಆದ್ದರಿಂದ ಬಾಳೆ ಎಲೆ, ಬಾಳೆ ಕಂದು, ಹೂವು, ಮಾವಿನ ಸೊಪ್ಪು ಹಾಗೂ ಇತರೆ ಪೂಜಾ ಸಾಮಗ್ರಿಗಳ ಮಾರಾಟಗಾರರು ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾತ್ರ ಮಾರಾಟ ಮಾಡಬೇಕು ಹಾಗೂ ಸಾರ್ವಜನಿಕರು ಇಲ್ಲಿಯೇ ಪೂಜಾ ಸಾಮಗ್ರಿಗಳನ್ನು ಖರೀದಿಸಿ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಕೋರಿದ್ದಾರೆ.