ಬೆಂಗಳೂರು: ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ.
ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಪ್ರಾಧಿಕಾರವು ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ ಸಿಬ್ಬಂದಿಯಿಂದ ತಪಾಸಣೆಗೆ ಒಳಪಡಬೇಕು. ಸಮಯ ಮೀರಿ ಆಗಮಿಸಿದರೆ ಅವರಿಗೆ ಪರೀಕ್ಷಾ ಕೇಂದ್ರಕ್ಕೆ ಅವಕಾಶವಿರುವುದಿಲ್ಲ.
ಉಳಿದಂತೆ ಪ್ರವೇಶ ಪತ್ರ, ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ ಮತ್ತು ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ.