ಹಿಮಾಚಲಪ್ರದೇಶ : ಉತ್ತರಭಾರತದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇದುವರೆಗೂ 145ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಹವಾಮಾನ ಇಲಾಖೆಯ ಪ್ರಕಾರ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. 636 ಮನೆಗಳು ಸಂಪೂರ್ಣ ಧ್ವಂಸಗೊಂಡಿದ್ದು, 1,128 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಒಟ್ಟಾರೆಯಾಗಿ, 1,110 ರಸ್ತೆಗಳನ್ನು ನಿರ್ಬಂಧಿಸಲಾಗಿದೆ.
ಮಳೆಯಿಂದ ಹಾನಿಗೊಳಗಾದ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಸುತ್ತಮುತ್ತಲಿನ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದ 100 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ಕಾರ್ಯಾಚರಣೆಯನ್ನು ನಡೆಸಲಾಗಿದೆ.