ಹಿರಿಯೂರು : ನಗರಸಭೆಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ: ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಹಿರಿಯೂರು ನಗರಸಭೆ ವತಿಯಿಂದ 2026-27ನೇ ಸಾಲಿನ ನಗರಸಭೆ ನಿಧಿಯಡಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ನಗರಸಭೆಯ ಶೇ. 24.10, ಶೇ. 7.25 ಹಾಗೂ ಶೇ. 5ರ ಯೋಜನೆಯಡಿ ಮೀಸಲಿರಿಸಿರುವ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯಡಿ ನಗರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ನೀಡಲಾಗುತ್ತದೆ. ಜೊತೆಗೆ ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ವಿತರಿಸಲಾಗುತ್ತದೆ. ಅರ್ಹ ದಿವ್ಯಾಂಗ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಕಾರ್ಯಕ್ರಮವೂ ಇದರಲ್ಲಿದೆ. ಅಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ಸಾರ್ವಜನಿಕರಿಗೆ ನಿವೇಶನ ಖರೀದಿಸಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ. ಇದರೊಂದಿಗೆ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಖಾಯಂ, ನೇರಪಾವತಿ, ಕ್ಷೇಮಾಭಿವೃದ್ಧಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರು, ಲೋಡರ್ಸ್ ಮತ್ತು ಡ್ರೈವರ್‍ಗಳಿಗೂ ಸಹ ನಿವೇಶನ ಖರೀದಿಸಲು ಸಹಾಯಧನ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಹ ಫಲಾನುಭವಿಗಳು  ಇದೇ ಜೂನ್ 12 ರಿಂದ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹಿರಿಯೂರು ನಗರಸಭೆ ವ್ಯಾಪ್ತಿಯ ಅರ್ಹ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯೂರು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon