ಹಿರಿಯ ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ

ಕೋಲ್ಕತ್ತಾ: ಖ್ಯಾತ ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ತಿ ಅವರ ಅವರಿಗೆ ಮೆದುಳಿನ ಸ್ಟ್ರೋಕ್ ಆಗಿತ್ತು ಎಂದು ತಿಳಿದು ಬಂದಿದ್ದು ಇದರಿಂದ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದ ಘಟನೆ ನಡೆದಿದೆ.

ಆದರೆ ಈ ಬಗ್ಗೆ ಮಾಹಿತಿಯನ್ನು ನೀಡಿದ ವೈದ್ಯರು ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಅವರ ಆರೋಗ್ಯ ಸುಧಾರಣೆ ಕಾಣುತ್ತಿದೆ. ಆದರೆ, ಈ ರೀತಿ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಮಿಥುನ್ ಚಕ್ರವರ್ತಿಗೆ 73 ವರ್ಷವಾಗಿದ್ದು ಫೆ 10 ರಂದು ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿತು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅವರು ಚೇತರಿಕೆ ಕಾಣುತ್ತಿದ್ದಾರೆ.

Advertisement

ನಟಿ ದೇವಶ್ರೀ ರಾಯ್, ನಿರ್ದೇಶಕ ಪತಿಕೃತ್​ ಬಸು ಮೊದಲಾದವರು ಆಸ್ಪತ್ರೆಗೆ ಬಂದು ಹೋಗಿದ್ದಾರೆ. ದೇವಶ್ರೀ ಅವರು ‘ಮಿಥುನ್​ ಚಕ್ರವರ್ತಿ ಅವರ ಆರೋಗ್ಯ ಸುಧಾರಿಸುತ್ತಿದೆ’ ಎಂದು ಹೇಳಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement