ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅಸ್ವಸ್ಥರಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯದ ಮಾಹಿತಿ ಪ್ರಕಾರ ಇಂದು ಬೆಳಗ್ಗೆ ಬಚ್ಚನ್ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ X ಮೂಲಕ ಅಭಿಮಾನಿಗಳಿಗೆ ಕೃತಜ್ಞತೆಯನ್ನು ತಿಳಿಸಿದ್ದಾರೆ.
ಅಪಧಮನಿಯ ಸಮಸ್ಯೆ ಇರುವವರಿಗೆ ಅಥವಾ ಹೃದಯಾಘಾತಕ್ಕೆ ಒಳಗಾದವರಿಗೆ ಪರಿಧಮನಿಯ ಆಂಜಿಯೋಪ್ಲಾಸ್ಟಿ ಅಗತ್ಯವಿರುತ್ತದೆ.