ಮೈಸೂರು :ಇಂದು ಬೆಳಗ್ಗೆ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು. ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾಂಸ್ಕೃತಿಕನಗರಿ ಮೈಸೂರಿನಲ್ಲೀಗ ದಸರಾ ಮಹೋತ್ಸವ ಕಳೆಗಟ್ಟಿದೆ. ಮೈಸೂರು ಮಧುವಣಗಿತ್ತಿಯಂತೆ ಸಿದ್ಧವಾಗಿದೆ. ಈ ಸಾರಿ ಪ್ರತಿ ವರ್ಷಕ್ಕಿಂತಲೂ ಸಂಭ್ರಮ ಹೆಚ್ಚಿದೆ.