ಹುಣಸೆ ಹಣ್ಣು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹುಣಸೆಹಣ್ಣು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.
ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹುಣಸೆ ಹಣ್ಣಿನ ರಸವನ್ನು ಸೇವಿಸುವುದರಿಂದ ರಕ್ತಹೀನತೆ ನಿವಾರಣೆಯಾಗುತ್ತದೆ.
ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಹುಣಸೆ ಹಣ್ಣು ಸಹಾಯಕ. ಹೃದಯ ಮತ್ತು ಯಕೃತ್ತಿನ ಸಮಸ್ಯೆಗಳನ್ನು ತಡೆಯುತ್ತದೆ.
ಜೀರ್ಣಕ್ರಿಯೆ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮಲಬದ್ಧತೆ, ಶೀತ, ಜ್ವರ ಮತ್ತು ವಾಕರಿಕೆ ಮುಂತಾದ ಕಾಯಿಲೆಗಳಿಗೆ ಹುಣಸೆಹಣ್ಣನ್ನು ಹೆಚ್ಚಾಗಿ ಬಳಸಲಾಗುತ್ತದೆ.