ಹುಲಿ ಉಗುರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನ ಸರಿಯಲ್ಲ- ಆರಗ

ಬೆಂಗಳೂರು:ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಏಕಾಏಕಿ ವ್ಯಕ್ತಿಗಳ ದಾಳಿ ನಡೆಸಿ ಬಂಧನ ಮಾಡುವುದು ಸರಿಯಾದ ಕ್ರಮ ಅಲ್ಲ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ನೂರಾರು ವರ್ಷಗಳಿಂದ ಇಂತಹ ವಸ್ತುಗಳ ಸಂಗ್ರಹ ಇದೆ. ಹಾಗೆ ಸಂಗ್ರಹಿಸಿಟ್ಟವರನ್ನೆಲ್ಲ ಬಂಧಿಸಿದರೆ ಹೇಗೆ ಎಂದಿದ್ದಾರೆ.

ವನ್ಯಜೀವಿ ರಕ್ಷಣಾ ಕಾಯ್ದೆ ಬರುವ ಮೊದಲು ಹುಲಿ ಉಗುರು, ವನ್ಯ ಪ್ರಾಣಿಗಳ ವಸ್ತುಗಳು ಮಲೆನಾಡು, ಕರಾವಳಿ ಭಾಗದಲ್ಲಿ ಅಲಂಕಾರಿಕ ವಸ್ತುವಾಗಿತ್ತು. ಮಕ್ಕಳಿಗೆ ಹುಲಿ ಉಗುರು ತೊಡಿಸುತ್ತಿದ್ದರು. ಏಕಾಏಕಿ ವ್ಯಕ್ತಿಗಳನ್ನು ಬಂಧನ ಮಾಡಿದರೆ ಜೈಲುಗಳಲ್ಲಿ ಸ್ಥಳ ಸಾಕಾಗುವುದಿಲ್ಲ ಎಂದು ಹೇಳಿದರು.

Advertisement

ವನ್ಯಜೀವಿ ರಕ್ಷಣಾ ಕಾಯ್ದೆಗೆ ನಾನು ವಿರೋಧಿ ಅಲ್ಲ. ಆದರೆ ಹಿಂದಿನ ಕಾಲದಿಂದಲೂ ಮನೆಯಲ್ಲಿ ಉಗುರು ಇಟ್ಟಿರುವವರನ್ನೆಲ್ಲ ಬಂಧಿಸುವುದು ಸರಿಯಲ್ಲ ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement