ಕೊಡಗು : ಎಂದಿನಂತೆ ಇಂದು ಬೆಳಗ್ಗೆ ಕೆಲಸಕ್ಕೆ ಹೊರಡಲು ರೆಡಿಯಾಗುವ ವೇಳೆ ಯುವತಿಯೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕು ಎಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರು, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
