ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಚಿತ್ರದುರ್ಗ ಇಂಡಿಯಾನ ಹಾರ್ಟ್ ಕ್ಲಿನಿಕ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್ ಪ್ರಾರಂಭಿಸಲಾಗಿದೆ.
ಪ್ರತಿ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಹೃದಯ ತಜ್ಞರೊಂದಿಗೆ ಉಚಿತ ಸಮಾಲೋಚನೆ ಇರುತ್ತದೆ. ರೋಗಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.