ಹೊಸದಿಲ್ಲಿ:ಹೆಚ್ಚುವರಿ ಉಪಮುಖ್ಯಮಂತ್ರಿಗಳ ಕುರಿತಂತೆ ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೂಚನೆ.
ಕಲ್ಯಾಣ ಸರ್ಕಾರದ ಕರ್ನಾಟಕ ಮಾದರಿಗೆ ಪಕ್ಷದೊಳಗೆ ಸಂಪೂರ್ಣ ಒಗ್ಗಟ್ಟು ಮತ್ತು ಏಕತೆ ಅಗತ್ಯವಿದೆ. ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಮಾಡುವ ವಿಭಜನೆ ಅಥವಾ ಗೊಂದಲಮಯ ಹೇಳಿಕೆಗಳು ನಮ್ಮ ಪಕ್ಷದ ಶಿಸ್ತು ಮತ್ತು ಒಗ್ಗಟ್ಟಿನ ಮೇಲೆ ಪರಿಣಾಮ ಬೀರುತ್ತವೆ.
ಹಾಗಾಗಿ, ಪಕ್ಷ ಮತ್ತು ಸರ್ಕಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸದೆ, ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಬೇಕೆಂದು ನಾನು ಎಲ್ಲಾ ಪಕ್ಷದ ನಾಯಕರಲ್ಲಿ ಕೋರುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಕೆಲವು ಕಾಂಗ್ರೆಸ್ ನಾಯಕರು ಮತ್ತು ಮಂತ್ರಿಗಳು ಈ ವದಂತಿಗಳ ಬಗ್ಗೆ ಪ್ರತಿಕ್ರಿಯಿಸುತ್ತಿರುವುದು ಕಳವಳಕಾರಿಯಾಗಿದೆ ಎಂದರು.