‘ಹೆಣ್ಣುಮಕ್ಕಳಿಗಾಗಿ ;ಬೋಯಿಂಗ್ ಸುಕನ್ಯಾ’ – ಪ್ರಧಾನಿ ಉದ್ಘಾಟಿಸುತ್ತಿರುವ ಈ ಯೋಜನೆಯಿಂದ ಉಪಯೋಗವೇನು?

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಬೋಯಿಂಗ್ ಸಂಸ್ಥೆಯ ಅತಿದೊಡ್ಡ ಘಟಕವನ್ನು ಬೆಂಗಳೂರಿನಲ್ಲಿ ಶುಕ್ರವಾರ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ದೇವನಹಳ್ಳಿ ಬಳಿಯಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ (ಬಿಐಇಟಿಸಿ) ಉದ್ಘಾಟನೆ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದರೆ.

1,600 ಕೋಟಿ ರೂ. ಬಂಡವಾಳದಲ್ಲಿನಿರ್ಮಿಸಲಾಗಿರುವ ಈ ನೂತನ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) 43 ಎಕರೆಗಳಷ್ಟು ವಿಶಾಲ ಪ್ರದೇಶದಲ್ಲಿ ವ್ಯಾಪಿಸಿದೆ.

Advertisement

ಇದೇನಿದು ‘ಬೋಯಿಂಗ್ ಸುಕನ್ಯಾ’ ಯೋಜನೆ:

ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ, ಇದು ಹೆಣ್ಣು ಮಕ್ಕಳಿಗೆ ವಾಯುಯಾನ ಕ್ಷೇತ್ರದಲ್ಲಿ ಕೌಶಲ್ಯ ತರಬೇತಿಯನ್ನು ಪಡೆಯಲು ವಿಫುಲ ಅವಕಾಶಗಳನ್ನು ಒದಗಿಸುತ್ತದೆ.

ಈ ಕಾರ್ಯಕ್ರಮವು ಭಾರತದಾದ್ಯಂತದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕ್ಷೇತ್ರಗಳಲ್ಲಿ ನಿರ್ಣಾಯಕ ಕೌಶಲ್ಯಗಳನ್ನು ಕಲಿಯಲು ಮತ್ತು ವಾಯುಯಾನ ವಲಯದಲ್ಲಿ ಉದ್ಯೋಗಗಳಿಗೆ ತರಬೇತಿ ನೀಡಲು ವಿಫುಲ ಅವಕಾಶಗಳನ್ನು ಒದಗಿಸುತ್ತದೆ. ಯುವತಿಯರಿಗಾಗಿ, ಪ್ರೋಗ್ರಾಂ 150 ಯೋಜಿತ ಸ್ಥಳಗಳಲ್ಲಿ STEM ಪ್ರಯೋಗಾಲಯಗಳನ್ನು ಸ್ಥಾಪಿಸಲಿದೆ. ಇದು STEM ವೃತ್ತಿಜೀವನದಲ್ಲಿ ಆಸಕ್ತಿ ಕೆರಳಿಸಲು ಮತ್ತು ಹುಟ್ಟುಹಾಕಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮವು ಪೈಲಟ್ ಆಗಲು ತರಬೇತಿ ಪಡೆಯುವ ಮಹಿಳೆಯರಿಗೆ ವಿದ್ಯಾರ್ಥಿವೇತನವನ್ನು ಸಹ ನೀಡುತ್ತದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement