ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ.ಇದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಎಚ್ ಡಿ.ಕುಮಾರಸ್ವಾಮಿ ನಡುವೆ ರಾಜಕೀಯ ಕದನಕ್ಕೆ ನಾಂದಿ ಹಾಡಿದೆ. ಆದರೆ ಈ ವಿಚಾರದ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ, ” ನನಗೆ ಈ ವಿಚಾರ ಗೊತ್ತೇ ಇಲ್ಲ” ಎನ್ನುವ ಮೂಲಕ ಜಾಣ ನಡೆ ಪ್ರದರ್ಶನ ಮಾಡಿದ್ದಾರೆ.
ಮಾಗಡಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮರುನಾಮಕರಣ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಉಪಮುಖ್ಯಮಂತ್ರಿ ನನಗೆ ವೈಯಕ್ತಿಕವಾಗಿ ಸಿಕ್ಕಿಲ್ಲ, ಅವರೊಂದಿಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ಹೆಸರು ಬದಲಾವಣೆ ಯಾವುದೇ ನಷ್ಟ, ತೊಂದರೆಗಲಾಗುವುದಿಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯಗಳು ಸಿಗಬೇಕು. ಆ ಉದ್ದೇಶದಿಂದ ಬದಲಾವಣೆಯಾದರೆ ತೊಂದರೆ ಇಲ್ಲ ಅಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚನ್ನಪಟ್ಟಣ, ರಾಮನಗರ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಈ ಹಿಂದೆ ಡಿಕೆಶಿ ತಿಳಿಸಿದ್ದರು.