ಮೈಸೂರು: “ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ” ಎಂದು ಹೇಳುವ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ” ಐದು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತೇವೆ ಎಂಬುವುದು ಅವರ ವೈಯಕ್ತಿಕ ಹೇಳಿಕೆ, ಇದರಲ್ಲಿ ಯಾವ ತಪ್ಪು ಇಲ್ಲ. ನಾನೇನು ಹೇಳಿಕೆ ನೀಡಿದರೂ ಅದು ನನ್ನ ವೈಯಕ್ತಿಕ ಅಭಿಪ್ರಾಯ ಹೀಗಾಗಿ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಕೂಡಾ ಸಿಎಂ ಆಗಲು ಸಿದ್ಧ” ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಜಿಲ್ಲಾಪಂಚಾಯಿತಿ ಸದಸ್ಯರಿಂದ ಹಿಡಿದು ಶಾಸಕರವರೆಗೂ ತಮ್ಮ ಅಭಿಪ್ರಾಯ ಹೇಳಿಕೊಳ್ಳುವ ಸ್ವತಂತ್ರ್ಯವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ, ಅವರ ಹೇಳಿಕೆಗಳು ಇಲ್ಲಿ ಶಾಸನವಲ್ಲ ಎಲ್ಲವೂ ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಯಾರಾಗಬೇಕು ಎನ್ನುವ ವಿಚಾರವನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನನಗೆ ಸೂಚಿಸಿದರೆ ನಾನು ಅದಕ್ಕೆ ಸಿದ್ದನಿದ್ಧೇನೆ ಎಂದು ಹೇಳಿದ್ದಾರೆ.