ಬೆಂಗಳೂರು: ಉದ್ಯಮಿಗೆ 5 ಕೋಟಿ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಸಿಬಿ ಇದೀಗ ಅಭಿನವ ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದೆ.
ಆರೋಪಿಯು ಹೈದರಾಬಾದ್ನಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರು ಬಂಧಿಸಲು ತೆರಳಿದ್ದಾರೆ. ಒಂದು ವೇಳೆ ಸ್ವಾಮೀಜಿ ಹೈದರಾಬಾದ್ನಲ್ಲಿ ಇರುವುದು ಕನ್ಫರ್ಮ್ ಆಗಿದ್ದರೆ ಇಂದು ಅಥವಾ ನಾಳೆ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಲಿದ್ದಾರೆ.
ಮೈಸೂರಿನಲ್ಲಿ ಕಾರು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರಚಲು ಕಾರಿನ ನಂಬರ್ ಪ್ಲೇಟ್ ತೆಗೆದು ಪ್ರಯಾಣಿಸಿದ್ದರು. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ೫ ಕೋಟಿ ವಂಚನೆ ಮಾಡಿದ ಆರೋಪದಡಿ ಸ್ವಾಮೀಜಿ ತಲೆಮರೆಸಿಕೊಂಡಿದ್ದಾರೆ.