ಹೈದರಾಬಾದ್: ತೆಲಂಗಾಣದ ಬಿಜೆಪಿಯು ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿದೆ.
ಜೊತೆಗೆ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಉಲ್ಲೇಖಿಸಿ ಇತರ ಐದು ನಗರಗಳಿಗೆ ಹೆಸರು ಬದಲಾವಣೆಯನ್ನು ಪ್ರಸ್ತಾಪಿಸಿದೆ. ಬಿಜೆಪಿ ಶಾಸಕ ಧನಪಾಲ್ ಸೂರ್ಯನಾರಾಯಣ ಅವರು, ನಿಜಾಮಾಬಾದ್, ಅದಿಲಾಬಾದ್ ಮತ್ತು ವಾರಂಗಲ್ ಹೆಸರನ್ನು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ. ಹೈದರಾಬಾದ್ ಲೋಕಸಭಾ ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ ಅವರು ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಎಐಎಂಐಎಂನ ಅಸಾದುದ್ದೀನ್ ಓವೈಸಿಗೆ ಸವಾಲು ಹಾಕುವ ಗುರಿಯೊಂದಿಗೆ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.