ದಾವಣಗೆರೆ : ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರÀ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.18 ಹಾಗೂ 19 ರಂದು ರೈತರಿಗೆ ಆಧುನಿಕ ಹೈನುಗಾರಿಕೆ ಚಟುವಟಿಕೆಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೆÇೀರ್ಟ್ ಸೈಜ್ ಪೆÇೀಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪೆÇ್ರೀತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.


































