ಮಲಪ್ಪುರಂ: ಕೇರಳ ಪೊಲೀಸರು ಹೊಸದಾಗಿ ಜಾರಿಗೆ ತಂದಿರುವ ಭಾರತೀಯ ನ್ಯಾಯ ಸಂಹಿತಾ(Bharatiya Nyaya Sanhita) ಅಡಿಯಲ್ಲಿ ಕರ್ನಾಟಕದ 24 ವರ್ಷದ ಯುವಕನ ವಿರುದ್ಧ ಮೊದಲ ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ.
ಕೊಂಡೊಟ್ಟಿ ಪೊಲೀಸ್ ಠಾಣೆ ಬಳಿ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಮಡಿಕೇರಿ ಮೂಲದ ಯುವಕನನ್ನು ವಶಕ್ಕೆ ಪಡೆಯಲಾಗಿದೆ.
ಯುವಕ, ಹೆಲ್ಮೆಟ್ ಧರಿಸದಿದ್ದಕ್ಕಾಗಿ BNS ನ ಸೆಕ್ಷನ್ 281 ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 194D ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಕೊಳತ್ತೂರು ಜಂಕ್ಷನ್‌ನಲ್ಲಿ ಯುವಕ ಮಧ್ಯರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಮಧ್ಯರಾತ್ರಿ 12:20 ಕ್ಕೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯ ದ್ವಿಚಕ್ರ ವಾಹನವನ್ನು ವಶಕ್ಕೆ ತೆಗೆದುಕೊಂಡು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಎಸ್‌ಎಚ್‌ಒ ದೀಪಕುಮಾರ್ ಖಚಿತಪಡಿಸಿದ್ದಾರೆ.
ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳ ಬದಲಿಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಅನುಸರಿಸುವ ಅಡಿಯಲ್ಲಿ ಈ ಎಫ್‌ಐಆರ್ ದಾಖಲಾಗಿದೆ.
