ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.!

 

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ದೊಡ್ಡಘಟ್ಟ ಎಸ್.ಸಿ ಕಾಲೋನಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. 2024ರ ಜನವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ದೊಡ್ಡಘಟ್ಟ ಎಸ್.ಸಿ ಕಾಲೋನಿ ಗ್ರಾಮದಲ್ಲಿ 3 ಎಎವೈ, 180 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 183 ಪಡಿತರ ಚೀಟಿಗಳಿವೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

Advertisement

ನಿಗಧಿತ ಅರ್ಜಿ “ಎ” ಅನ್ನು ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಅಥವಾ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

=========

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement