ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್ ಗುಡ್ ನ್ಯೂಸ್..!

WhatsApp
Telegram
Facebook
Twitter
LinkedIn

ಹೊಸ ರೇಷನ್ ಕಾರ್ಡ್ ಗಳನ್ನು ನೀಡುವ ಪ್ರಕ್ರಿಯೆಯನ್ನು ಸೆಪ್ಟೆಂಬ‌ರ್ ನಿಂದ ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿಗಾಗಿ ಬಂದಿದ್ದ 2.95 ಲಕ್ಷ ಅರ್ಜಿಗಳಲ್ಲಿ 50 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಜಾ ಮಾಡಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್ (BPL card) ನೀಡಲು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅನರ್ಹ ಅರ್ಜಿಗಳನ್ನು ವಜಾ ಮಾಡಲಾಗಿದೆ.  2.40 ಲಕ್ಷ ಅರ್ಜಿಗಳನ್ನು ಪರಿಷ್ಕರಣೆ ಮಾಡಲಾಗಿದೆ.

 

ಆಹಾರ ಇಲಾಖೆಯಿಂದ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 90 ಸಾವಿರ ಹೊಸ ರೇಷನ್ ಕಾರ್ಡ್ (New Ration Card) ಗಳಿಗೆ ಬೇಡಿಕೆ ಇಟ್ಟಿದ್ದು, ಈಗಾಗಲೇ ರೇಷನ್ ಕಾರ್ಡ್ ಪರಿಷ್ಕರಣೆ ಮಾಡುವ ಪ್ರಕ್ರಿಯೆ ನಡೆದಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ಇತ್ಯರ್ಥ ಮಾಡಿದ ನಂತರ ಸೆಪ್ಟೆಂಬರ್ ನಲ್ಲಿ ಹೊಸ ಪಡಿತರ ಚೀಟಿಗಳನ್ನು ನೀಡುವ ಪ್ರಕ್ರಿಯೆ ಆರಂಭವಾಗಲಿದೆ.

 

ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು :

ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳುಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ(new ration card) ಅರ್ಹರಾಗುತ್ತಾರೆ.

ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳುಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

ಹೊಸ ರೇಷನ್ ಕಾರ್ಡ್ ಪಡೆಯಲು ಅಗತ್ಯ ದಾಖಲೆಗಳು (Documents) :

ಆಧಾರ್ ಕಾರ್ಡ್ಮನೆಯ ಸದಸ್ಯರ ಆಧಾ‌ರ್ ಕಾರ್ಡ್‌ಗಳು, ಆದಾಯ ಪ್ರಮಾಣ ಪತ್ರ,  ಜಾತಿ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ,  ಮೊಬೈಲ್ ಸಂಖ್ಯೆ (ಕಡ್ಡಾಯ) , ಬಾಡಿಗೆದಾರರಿಗೆ ಒಪ್ಪಂದ ಪತ್ರ (ಕಡ್ಡಾಯ)

ಅರ್ಜಿ ಸಲ್ಲಿಸುವುದು ಹೇಗೆ (How to apply application) :

ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one), ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಸೆನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.ಆನ್ಸೆನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon