ದೆಹಲಿ : ಲೋಕಸಭಾ ಚುನಾವಣೆ ಅಂತ್ಯಗೊಂಡ ಬೆನ್ನಲ್ಲೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಇಂದು ಪ್ರಧಾನಿ ಮೋದಿ ಸಚಿವರ ಸಭೆಯನ್ನು ಕರೆದಿದ್ದಾರೆ.
ರಮಲ್ ಚಂಡಮಾರುತದ ನಂತರ ಪರಿಸ್ಥಿತಿ ಮತ್ತು ಈಶಾನ್ಯ ರಾಜ್ಯಗಳಲ್ಲಿನ ಪ್ರವಾಹ ಕುರಿತು ಮೋದಿ, ಸಚಿವರೊಂದಿಗೆ ಚರ್ಚಿಸಲಿದ್ದಾರೆ. ಕೆಲವು ದಿನಗಳ ಹಿಂದೆ ಅಪ್ಪಳಿದ ರಮನ್ ಚಂಡಮಾರುತದಿಂದಾಗಿ ಪಸ್ಚಿಮ ಬಂಗಾಳ, ಅಸ್ಸಾಂ, ಮಣಿಪುರ ಸೇರಿದಂತೆ ಈಶಾನ್ಯಗಳಲ್ಲಿ ಭಾರೀ ಹಾನಿ ಉಂಟುಮಾಡಿತ್ತು. ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ತೀವ್ರ ಬಿಸಿ ಗಾಳಿಯಿಂದ ಜನರು ಸಾವನ್ನಪ್ಪುತ್ತಿದ್ದಾರೆ.
ಬಿಸಿಗಾಳಿಯನ್ನು ಎದುರಿಸಲು ಕೇಂದ್ರ ಮಟ್ಟದಲ್ಲಿ ಯಾವ ಯೋಜನೆ ರೂಪಿಸಬೇಕು ಎಂಬ ಬಗ್ಗೆ ಮೋದಿ ಚರ್ಚೆ ನಡೆಸಲಿದ್ದಾರೆ. ಜೂ.5ರಂದು ವಿಶ್ವ ಪರಿಸರ ದಿನವನ್ನು ದೊಡ್ಡ ಮಟ್ಟದಲ್ಲಿ ಆಚರಿಸಲು ಸಿದ್ಧತೆಗಳನ್ನು ಪರಿಶೀಲಿಸಲು ಮೋದಿ ಸಭೆ ಕರೆದಿದ್ದಾರೆ. ಹಾಗೆಯೇ, ಮೋದಿ ಅವರು 100 ದಿನಗಳ ಕಾರ್ಯಸೂಚಿಯನ್ನು ಪರಿಶೀಲಿಸಲಿದ್ದಾರೆ. ಹೊಸ ಸರ್ಕಾರ ರಚನೆಯ ನಂತರ ಮೂರು ತಿಂಗಳಲ್ಲಿ ಮಾಡಬೇಕಾದ ಕೆಲಸಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿದು ಬಂದಿದೆ.