ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉದ್ಯೋಗ ಒದಗಿಸುವ ಮತ್ತು ಮಾಸಿಕವಾಗಿ ₹7,000ಗಳಿಸಬಹುದಾದ ಎಲ್‌ಐಸಿಯ ಬಿಮಾ ಸಖಿ ಯೋಜನೆಗೆ ಇದೀಗ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.
ಹೌದು, ಪ್ರಧಾನಿ ನರೇಂದ್ರ ಮೋದಿ 2024ರ ಡಿಸೆಂಬರ್ 9ರಂದು ಹರಿಯಾಣದ ಪಾಣಿಪತ್‌ನಲ್ಲಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದ್ದರು.
ಜೀವ ವಿಮಾ ನಿಗಮ (ಎಲ್‌ಐಸಿ) ಈ ಯೋಜನೆಯು 10ನೇ ತರಗತಿಯನ್ನು ಪೂರ್ಣಗೊಳಿಸಿದ 18-70 ವರ್ಷ ವಯಸ್ಸಿನ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.
ಒಂದೇ ತಿಂಗಳಲ್ಲಿ 52,000ಕ್ಕೂ ಹೆಚ್ಚು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಈಗಾಗಲೇ ಇವರು ಕಾರ್ಯತತ್ಪರರಾಗಿದ್ದಾರೆ ಎಂದು ತಿಳಿದುಬಂದಿದೆ.