ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷ ತುಂಬಿರಲೇಬೇಕು, ಇಲ್ಲವಾದರೆ ಮಗುವಿಗೆ ಪ್ರವೇಶವಿಲ್ಲ.
ಈ ಕುರಿತಂತೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದಾಗಿ ಪೋಷಕರು ಇನ್ನು ಮುಂದೆ ಮಕ್ಕಳನ್ನು ಶಾಲೆಗೆ ಸೇರಿಸಬೇಕಾದರೆ ಈ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ.
2022ರ ಜುಲೈ 26ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕೆಂದು 4 ವರ್ಷದ ಪುತ್ರಿಯ ತಂದೆ ಬೆಂಗಳೂರಿನ ಅನಿಕೇತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.