ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 1 ವಾರ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ 3 ಜಿಲ್ಲೆಗಳಿಗೆ 1 ವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೆ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂದಿನ 5 ದಿನ ಕರಾವಳಿ ಜಿಲ್ಲೆಗಳು ಸೇರಿದಂತೆ ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ಧಾರವಾಡ, ಶಿವಮೊಗ್ಗ, ಬೆಳಗಾವಿ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದೆ.