ಬೆಂಗಳೂರು : ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಈ ಹಿನ್ನೆಲೆ ರನ್ಯಾರಾವ್ ಮತ್ತು ಸಂಗಡಿಗರಿಗೆ 1 ವರ್ಷ ಜೈಲೇ ಗತಿಯಾಗಿದೆ.
ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರನ್ಯಾರಾವ್, ತರುಣ್ ಕೊಂಡಾರಾಜ್ ಮತ್ತು ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಜಾರಿ ಮಾಡಲಾಗಿದೆ.
ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಜಾರಿಗೊಳಿಸಲಾಗುತ್ತದೆ. ಈ ಕಾಯ್ದೆಯನ್ನು ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(ಸಿಇಐಬಿ) ಜಾರಿ ಮಾಡುತ್ತದೆ.
ಇನ್ನು ಕಾಫಿಪೋಸಾ ಕಾಯ್ದೆಯನ್ನು ಜಾರಿಗೊಳಿಸಿದರೆ ಆರೋಪಿಯು 1 ವರ್ಷಗಳ ಕಾಲ ಜೈಲಿನಲ್ಲೇ ಇರಬೇಕು. ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಈ ಕಾಯ್ದೆಯ ಪ್ರಮುಖ ಉದ್ದೇಶ.