ಚಿಕ್ಕೋಡಿ : ಸರ್ಕಾರಿ ಶಾಲೆ ಶಿಕ್ಷಕನೋರ್ವ ತನ್ನದೇ ಶಾಲೆಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಿಕ್ಷಕ ಸಾದಿಕ ಬೇಗ್ ಬಂಧಿತ ಆರೋಪಿ. ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಶಿಕ್ಷಕನಾಗಿರುವ ಆರೋಪಿ ಶಿಕ್ಷಕ. ಅದೇ ಶಾಲೆಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪ. ವಿದ್ಯಾರ್ಥಿನಿ ಪೋಷಕರ ಬಳಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯಾವಾಗ ಶಿಕ್ಷಕನ ವಿರುದ್ಧ ಆರೋಪ ಕೇಳಿ ಬರುತ್ತಿದ್ದಂತೆ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ನಮಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ವಿದ್ಯಾರ್ಥಿನಿಯರು ಗಂಭೀರ ಆರೋಪ ಮಾಡಿದ್ದಾರೆ. ಪಾಠ ಹೇಳುವ ನೆಪದಲ್ಲಿ ಕಿರುಕುಳ. ಬ್ಯಾಡ್ ಟಚ್ ಮಾಡುವ ಮೂಲಕ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಇರಿಸುಮುರಿಸು ಮಾಡಿರುವ ಆರೋಪಿ.
ಘಟನೆ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಗೆ ದೂರು ನೀಡಿದ ಪೋಷಕರು. ದೂರು ನೀಡುತ್ತಿದ್ದಂತೆ ತಡರಾತ್ರಿ ಆರೋಪಿ ಶಿಕ್ಷಕ ಸಾದಿಕ್ ಬೇಗ್ ಬಂಧಿಸಿದ ಪೊಲೀಸರು. ಸದ್ಯ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ಮುಂದುವರಿದಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ