10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ

 

 

ಚಿತ್ರದುರ್ಗ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ  ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ  10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಆಯೋಜಿಸಲಾಗಿದೆ.

Advertisement

ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಉದ್ಯಮ ಆಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಏಪ್ರಿಲ್ 19 ರಿಂದ 30 ರವರೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸಂಘಟಿಸಲಾಗುವುದು.

ಉದ್ಯಮಶೀಲರ ಗುಣಲಕ್ಷಣಗಳು, ಸಾಮಾನ್ಯ ವ್ಯಕ್ತಿಯಿಂದ ಉದ್ಯಮಶೀಲ ವ್ಯಕ್ತಿಯಾಗಿ ಪರಿವರ್ತನೆಯಾಗಲು ಸಾಧನೆ ಪ್ರೇರಣ ತರಬೇತಿ, ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಉದ್ಯಮಾವಕಾಶಗಳ ಮಾಹಿತಿ, ಉದ್ಯಮ ಆಯ್ಕೆಯ ವಿಧಾನ, ಹಣಕಾಸು ನಿರ್ವಹಣೆ, ಮಾರುಕಟ್ಟೆ ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ, ಸಣ್ಣ ಉದ್ಯಮ ನಿರ್ವಹಣೆ ಸರ್ಕಾರದ ಸ್ವಯಂ ಉದ್ಯೋಗದ ಯೋಜನೆಗಳು ಇತ್ಯಾದಿ ವಿಷಯಗಳ ಬಗ್ಗೆ ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ತರಬೇತಿ ಅವಧಿಯಲ್ಲಿ ಏರ್ಪಡಿಸಲಾಗುವದು. ಇದರ ಜೊತೆಗೆ ಶಿಬಿರಾರ್ಥಿಗಳಿಗೆ ಉದ್ಯಮ ಪ್ರಾರಂಭಿಸಲು ಬೆಂಬಲಸೇವೆ ನೀಡಲಾಗುವುದು.

18 ರಿಂದ 55 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾದ, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಆಸಕ್ತ ಉದ್ಯಮಾಕಾಂಕ್ಷಿಗಳು ಜೋಗಿಮಟ್ಟಿ ರಸ್ತೆಯ ಸಿಡಾಕ್ ಜಂಟಿ ನಿರ್ದೇಶಕರ ಕಛೇರಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ತರಬೇತುದಾರ ವಿಜಯ ಕುಮಾರ ಮೊಬೈಲ್ ಸಂಖ್ಯೆ 7760270058 ಕರೆ ಮಾಡಬಹದು. ಅಭ್ಯರ್ಥಿಗಳು 2 ಪಾಸ್‌ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ  ಊಟೋಪಚಾರದೊಂದಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. ಆದರೆ ಆಯ್ಕೆಯಾದ ಶಿಬಿರಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಪ್ರಯಾಣ ಮಾಡಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement