ಇಂಫಾಲ : ಮಣಿಪುರದ ನಿಷೇಧಿತ ಸಂಘಟನೆಗಳಿಗೆ ಸೇರಿದ 10 ಮಂದಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ.
ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಸಂಘಟನೆ ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಾರ್ಟಿಯ (ಪೀಪಲ್ಸ್ ವಾರ್ ಗ್ರೂಪ್) ಏಳು ಮಂದಿಯನ್ನು ಪಶ್ಚಿಮ ಇಂಫಾಲ ಜಿಲ್ಲೆಯ ತೇರಾ ಉರಾಕ್ ಪ್ರದೇಶದಲ್ಲಿ ಬಂಧಿಸಲಾಗಿದೆ.
ಮತ್ತೊಂದು ಕಾರ್ಯಾಚರಣೆಯಲ್ಲಿ ನಿಷೇಧಿತ ಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಪೂರ್ವ ಇಂಫಾಲ ಜಿಲ್ಲೆಯ ಖುರೈ ಚಿಂಗಂಗ್‌ಬಮ್ ಲೈಕೈ ಪ್ರದೇಶದಲ್ಲಿ ಬಂಧಿಸಲಾಗಿದೆ. ಹಾಗೂ ಸುಲಿಗೆಯಲ್ಲಿ ತೊಡಗಿದ್ದ ಮತ್ತೋರ್ವನನ್ನು ಬಿಷ್ಣುಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತ ಸದಸ್ಯರಿಂದ ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.