ಗ್ಯಾಂಗ್ಟಾಕ್ : ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ವಾಹನ 100 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಧನ್ಬಾದ್ ಐಐಟಿ (ಐಎಸ್ಎಂ) ನ ಹತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ 9:30 ರ ಸುಮಾರಿಗೆ ಫಾರೆಸ್ಟ್ ದಾರಾದ ಪಕ್ಷೇಪ್ ಬಳಿ ಈ ಅಪಘಾತ ಸಂಭವಿಸಿದೆ, ಆಗ ವಿದ್ಯಾರ್ಥಿಗಳು ಲಾಚುಂಗ್ ನಿಂದ ಗ್ಯಾಂಗ್ಟಕ್ ಗೆ ಪ್ರಯಾಣಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಗಾಯಗೊಂಡಿದ್ದ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳಲ್ಲಿ ನಾಲ್ವರು ಮಹಿಳೆಯರು ಇದ್ದರು. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಗ್ಯಾಂಗ್ಟಕ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಉಳಿದವರಿಗೆ ಮಂಗನ್ನಲ್ಲಿ ಚಿಕಿತ್ಸೆ ನೀಡಲಾಗಿದೆ.