Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

100 ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ ‘ -ಬಸವರಾಜ ಬೊಮ್ಮಾಯಿ

0

ಬೆಂಗಳೂರು:  ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು ಹಳಿ ತಪ್ಪಿದ ಆಡಳಿತ ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಅವರೊಂದಿಗೆ ಬಿಡುಗಡೆ ಮಾಡಿ ಮಾತನಾಡಿದರು.

ಸಂಪೂರ್ಣ ಬಹುಮತ ಪಡೆದ ಸರ್ಕಾರ ಯಾವ ರೀತಿ ಆಡಳಿತ ಆರಂಭ ಮಾಡಿ ಯಾವ ರೀತಿ ದಿಕ್ಸೂಚಿ ನೀಡಬೆಕಾಗಿತ್ತು ಅದರ ಬದಲು ದಿಕ್ಕು ತಪ್ಪಿದ ಸರ್ಕಾರ ಇದಾಗಿದೆ. ಸರ್ಕಾರ ಗೊಂದಲದಲ್ಲಿ ಸಿಲುಕಿ ಮಾತಿಗೆ ತಪ್ಪಿದ ಸರ್ಕಾರ ಇದಾಗಿದೆ. ಹಣಕಾಸಿನ ವ್ಯವಸ್ಥೆಯನ್ನು ಹಳಿ ತಪ್ಪಿಸಿದೆ. ನಾವು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು‌ ಇವರು ಬಂದ ಮೇಲೆ 8 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸುಮಾರು 35 ಸಾವಿರ ಕೋಟಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಒಟ್ಟು 45 ಸಾವಿರ ಕೋಟಿ ರೂ. ತೆರಿಗೆ ಮೂಲಕ ಸಂಗ್ರಹಿಸುವ ಅವಕಾಶ ಮಾಡಿಕೊಂಡು 12 ಸಾವಿರ ಕೋಟಿ ಡೆಫಿಸಿಟ್ ಹೆಚ್ಚಳ ಮಾಡಿಕೊಂಡಿದ್ದಾರೆ ನಾವು ಕೊವಿಡ್ ನಂತರ ಸರ್ ಪ್ಲಸ್ ಬಜೆಟ್ ಮಾಡಿದ್ದೇವು. ಇವರು ಕೊವಿಡ್ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಾರಿಗೆ ನೌಕರರ ಸಂಬಳ ವಿಳಂಬವಾಗುತ್ತಿದೆ. ಇವರು ಬಂದ ಮೇಲೆ ಒಂದು ಕಿಮಿ ರಸ್ತೆಯನ್ನೂ ಮಾಡಿಲ್ಲ ಎಂದು ಹೇಳಿದರು.

ಹೆಚ್ಚಿದ ರೈತರ ಆತ್ಮಹತ್ಯೆ
ರಾಜ್ಯದಲ್ಲಿ ಬರಗಾಲ ಬಂದರೂ ರೈತರ ಕಡೆ ತಿರುಗಿ ನೋಡಿಲ್ಲ. ಎರಡು ಬಾರಿ ಬಿತ್ತನೆ ಮಾಡಿದ್ದರೂ ಬೆಳೆ ಬಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 4500 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯಬೇಕಿದೆ. ಸಾಲ ವಸೂಲಿ ನಿಲ್ಲಿಸಬೇಕು. ಕೃಷಿ ಇಲಾಖೆಯಲ್ಲಿ ಟ್ರಾನ್ಸ್ ಫರ್ ಸುಗ್ಗಿ ನಡೆಯುತ್ತಿದೆ. ಎಲ್ಲ ಇಲಾಖೆಗಳಲ್ಲಿ ಟ್ರಾನ್ಸ್ ಫರ್ ಸುಗ್ಗಿ ನಡೆಯುತ್ತಿದೆ ಎಂದು ಆರೋಪಿಸಿದರು.

ನಮ್ಮ ಸರ್ಕಾರದ ರೈತ ವಿದ್ಯಾನಿಧಿ, ಭೂಸಿರಿ, ರೈತರಿಗೆ ವಿಮೆ ನೀಡುವ ಜೀವನ ಜ್ಯೋತಿ ಯೋಜನೆ, ರೈತ ಶಕ್ತಿ ಯೋಜನೆ ಸ್ಥಗಿತಗೊಳಿಸಿದ್ದಾರೆ. ರೈತರ ಆವರ್ತ ನಿಧಿ 100 ಕೋಟಿ ಮೀಸಲಿಟ್ಟಿದ್ದೇವು ಅದನ್ನು ನಿಲ್ಲಿಸಿದ್ದಾರೆ. ಇವರು ದಲಿತರ ಬಗ್ಗೆ ಮಾತನಾಡುತ್ತಾರೆ. 100 ಅಂಬೇಡ್ಕರ್ ಹಾಸ್ಟೇಲ್ ಮಾಡಿದ್ದೇವು, ಕನಕದಾಸ ಹಾಸ್ಟೇಲ್ ಗಳು, ಐದು ಮೆಗಾ ಹಾಸ್ಟೇಲ್ ಗಳಿಗೆ ಅನುದಾನ ನೀಡಿಲ್ಲ. ನಮ್ಮ ಸರ್ಕಾರದ ಸ್ತ್ರೀಸಾಮಾರ್ಥ್ಯ ಯೋಜನೆ ಸ್ಥಗಿತಗೊಳಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಹಗಲು ದರೋಡೆ ರೀತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಮಂತ್ರಿಗಳ ನಡುವೆ ಭ್ರಷ್ಟಾಚಾದ ಜಗಳ ನಡೆಯುತ್ತಿದೆ. ಬೆಂಗಳೂರು ರೂರಲ್ ಎಸಿ, ಡಿಸಿ ಹುದ್ದೆಗಳಿಗೆ ಹರಾಜು ನಡೆಯುತ್ತಿದೆ. ಬೆಂಗಳೂರು ಎಸಿ ರೇಟ್ ಜಾಸ್ತಿಯಾಗಿದೆಯಂತೆ ಈಗ 13 ಕೋಟಿಗೆ ಏರಿದೆಯಂತೆ ಎಂದು ತಿಳಿಸಿದರು.

ದಮನಕಾರಿ ನೀತಿ ಅನುಕರಣೆ
ಯಾರಾದರೂ ದೂರು ಕೊಟ್ಟರೆ ಅವರ ವಿರುದ್ದ ಕ್ರಮ ಕಾಂಟ್ರಾಕ್ಟರ್ ಗಳು ರಾಜ್ಯಪಾಲರಿಗೆ ದೂರು ನೀಡಿದರೆ ಅವರಿಗೆ ನೊಟೀಸ್ ನೀಡುತ್ತಿದ್ದಾರೆ. ಶಾಸಕ ಬಿ.ಆರ್ ಪಾಟಿಲ್ ಅವರು ಫೇಕ್ ಲೆಟರ್ ಅಂತ ಹೇಳಿದರು. ಅದು ಫೆಕ್ ಹೌದೊ ಅಲ್ಲವೊ ಅನ್ನುವುದು ತನಿಖೆಯಾಗಬೇಕು. ಅದನ್ನು ಬಿಟ್ಟು ಸುದ್ದಿ ಮಾಡಿದ ಪತ್ರಕರ್ತರಿಗೆ ನೊಟೀಸ್ ನೀಡುತ್ತಿದ್ದಾರೆ. ಯಾರೇ ಏನೇ ಪೋಸ್ಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುವ ದಮನಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಕ್ರೈಮ ಗಳು ರಾಜಾರೋಷವಾಗಿ ನಡೆಯುತ್ತಿದೆ. ಅಕ್ರಮ ಬಾರ್ ಗಳು ತಲೆ ಎತ್ತುತ್ತಿವೆ. ಮಂತ್ರಿಗಳಿಗೆ ಕಮಿಷನ್ ನೀಡಲು ಪೈಪೋಟಿ ನಡೆಯುತ್ತಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಪೂರ್ಣ ಸ್ಥಗಿತ ಆಗಿದೆ ಎಂದು ಹೇಳಿದರು.

Leave A Reply

Your email address will not be published.