11 ವರ್ಷದ ಬಾಲಕ ಹೃದಯಘಾತಕ್ಕೆ ಬಲಿ

ಹೃದಯಾಘಾತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃತ ಬಾಲಕ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement