ಪ್ಯಾರಿಸ್: ಭಾರತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡನೇ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಅವರನ್ನೊಳಗೊಂಡ ಜೋಡಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಇದಕ್ಕೂ ಮುನ್ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಹರ್ಯಾಣ ಮೂಲದ 22 ವರ್ಷದ ಮನು ಭಾಕರ್ ಕಂಚಿನ ಪದಕ ಜಯಿಸಿದ್ದರು. ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದರು.
ಇದೀಗ ಮನು ಭಾಕರ್, ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಸ್ವತಂತ್ರ ಭಾರತದಲ್ಲಿ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ದೇಶದ ಮೊದಲ ಕ್ರೀಡಾಪಟು ಎನ್ನುವ ಹಿರಿಮೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.