ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಅಧಿಕೃತ ಅಧಿಸೂಚನೆಯ ಮೂಲಕ ಗೃಹರಕ್ಷಕ ದಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾರ್ಚ್ 03 ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗೆ ಕನಿಷ್ಠ 19 ವರ್ಷ ಮತ್ತು ಗರಿಷ್ಠ 50 ವರ್ಷ ವಯಸ್ಸಿನವರಾಗಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಗೃಹರಕ್ಷಕ ದಳದ ಜಿಲ್ಲಾ ಕಚೇರಿ, ಸರಸ್ವೋದಯ ನಗರ, ದಿವೇಕರ್ ವಾಣಿಜ್ಯ ಕಾಲೇಜಿನ ಎದುರು, ಕೋಡಿಬಾಗ್, ಕಾರವಾರ ಈ ವಿಳಾಸಕ್ಕೆ ಮಾರ್ಚ್ 03 ಅಥವಾ ಅದಕ್ಕೂ ಮೊದಲು ಸಲ್ಲಿಸಬೇಕು.