‘150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ’ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಹೆಚ್ಚು ಕನ್ನಡ ಚಿತ್ರಗಳು ಬರಬೇಕು

Advertisement

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

ಅಕ್ಟೋಬರ್-04 ರಿಂದ 10 ವರೆಗೆ ಸಿನಿಮಾ ಪ್ರದರ್ಶನ

ದಸರಾ ಚಲನಚಿತ್ರೋತ್ಸವ ಅಕ್ಟೋಬರ್-04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕಂತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ತಿಳಿಸಿದರು.

ಕನ್ನಡ ಚಿತ್ರರಂಗ ಮರೆಯಲಾಗದ ವ್ಯಕ್ತಿ ದ್ವಾರಕೀಶ್ ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement