ತುಮಕೂರು : ಗೃಹ ಸಚಿವ ಜಿ ಪರಮೇಶ್ವರ್ ಅವರು ಶೀಘ್ರದಲ್ಲಿಯೇ 15,000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 1500 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಮರು ಪರೀಕ್ಷೆಗೆ ಕೋರ್ಟ್ ಅನುಮತಿ ಕೂಡ ನೀಡಿದೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, 7 ನೇ ವೇತನ ಆಯೋಗ ಜಾರಿಗೆ ಮಾಡಿದಲ್ಲಿ ಪ್ರತ್ಯೇಕವಾಗಿ ಔರಾದ್ಕರ್ ವರದಿ ಜಾರಿ ಮಾಡುವ ಅಗತ್ಯ ಇಲ್ಲ ಎಂದರು.