Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

16ನೇ ವಿಧಾನಸಭೆಯ ಕಲಾಪ ಆರಂಭ – ನೂತನ ಶಾಸಕರ ಪ್ರಮಾಣವಚನ ಸ್ವೀಕಾರ

0

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗಿದ್ದು ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ.

ಇದಾದ ಬಳಿಕ ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ಆರಂಭವಾಗಿದೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಹಾಗೂ ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಚಿವರಾಗಿರುವ ಡಾ.ಜಿ.ಪರಮೇಶ್ವರ್, K.H​.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಸತೀಶ್​ ಜಾರಕಿಹೊಳಿ, ರಾಮಲಿಂಗಾರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲದೇ ಯು.ಟಿ.ಖಾದರ್​, ಶಿವಾನಂದ ಪಾಟೀಲ್ ಕೂಡಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

Leave A Reply

Your email address will not be published.