ಚಿತ್ರದುರ್ಗ: ಮಳೆಯಿಂದಾಗಿ ಜಿಲ್ಲೆಯಾದ್ಯಂತ 17 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಒಟ್ಟು 13 ಮನೆಗಳಿಗೆ ನೀರುನುಗ್ಗಿರುವ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6 ಮನೆಗಳು ಭಾಗಶಃ ಹಾನಿ ಹಾಗೂ 2 ಮನೆಗಳು ತೀವ್ರತರ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ, 1 ಮನೆ ತೀವ್ರತರ ಹಾನಿಯಾಗಿವೆ. 13 ಮನೆಗಳಿಗೆ ನೀರು ನುಗ್ಗಿದ್ದು, 7 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಹಿರಿಯೂರು ತಾಲ್ಲೂಕಿನಲ್ಲಿ 1 ಮನೆ ತೀವ್ರತರ ಹಾನಿಯಾಗಿದ್ದು, 10 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.