Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

18 ರಿಂದ 30 ವರ್ಷದೊಳಗಿನವರು ಸೆ.30ರಂದು ನೇರ ನೇಮಕಾತಿ ಸಂದರ್ಶನ

0

 

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆಪ್ಟೆಂಬರ್ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಬೆಂಗಳೂರಿನ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮೊ, ಐಟಿಐ, ಹಾಗೂ ಯಾವುದೇ ಪದವಿ ವಿದ್ಯಾರ್ಹತೆವುಳ್ಳವರು ಸಂದರ್ಶನದಲ್ಲಿ ಭಾಗವಹಿಸಬಹುದು. ವಯೋಮಿತಿ 18 ರಿಂದ 30 ವರ್ಷದೊಳಗಿಬೇಕು. ಬಯೋಡಾಟಾ-5 ಪ್ರತಿ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022459064, 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.