ಧಾರವಾಡ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಹಾಗೂ ಜಿಲ್ಲಾಧಿಕಾರಿಗಳು, ಧಾರವಾಡ ಜಿಲ್ಲೆ ಇವರ ಅನುಮೋದನೆಯಂತೆ, ಧಾರವಾಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ಹುಬ್ಬಳ್ಳಿ ಧಾರವಾಡ(ಶಹರ) ದಲ್ಲಿ ಖಾಲಿ ಇರುವ ಒಟ್ಟು 192 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ಜೂನ್ 21, 2025 ರೊಳಗಾಗಿ https://karnemakaone.kar.nic.in/abcd/ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440733 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.